Tuesday, 17 June 2025

ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್ ನಿಧನ

 

ಚಿಕ್ಕೋಡಿ: ನಿಪ್ಪಾಣಿ (Nippani) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್ (70) ತಡರಾತ್ರಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಕಾಸಾಹೇಬ್ ಪಾಟೀಲ್ (Kakasaheb P Patil) ಚಿಕಿತ್ಸೆ ಫಲಿಸದೇ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

1999ರಿಂದ 2013 ರವರೆಗೆ ಸತತ ಮೂರು ಬಾರಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ವಿಧಾನ ಸಭಾ ಕ್ಷೇತ್ರದಿಂದ ಕಾಕಾಸಾಹೇಬ್ ಪಾಟೀಲ್ ಶಾಸಕರಾಗಿದ್ದರು. ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬೆಂಬಲಿಗರನ್ನು ಕಾಕಾಸಾಹೇಬ್ ಪಾಟೀಲ್ ಅಗಲಿದ್ದು, ನಿಪ್ಪಾಣಿಯಲ್ಲಿ ಇಂದು ಅಂತ್ಯಕ್ರಿಯೆ ಜರುಗಲಿದೆ. ಅಂತ್ಯಕ್ರಿಯೆಯಲ್ಲಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ. 

Thursday, 12 June 2025


 ಸರ್ಕಾರ ಸಮಾಜೋ ಶೈಕ್ಷಣಿಕ ಸಮೀಕ್ಷೆ ನಡೆಸುವುದಾಗಿ ಹೇಳಿಲ್ಲ



ಸರ್ಕಾರ ನಡೆಸಲಿರುವ ಜಾತಿಗಣತಿಗಿಂತ ಈ ಸಮೀಕ್ಷೆ ಹೇಗೆ ಭಿನ್ನವಾಗಿ ಇರುತ್ತದೆ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರವೂ ಎಲ್ಲಿಯೂ ಕೂಡಾ ಸಮಾಜೋ ಶೈಕ್ಷಣಿಕ ಸಮೀಕ್ಷೆ ನಡೆಸುವುದಾಗಿ ಹೇಳಿಲ್ಲ. ನಾವು ಸಮಾಜೋ ಶೈಕ್ಷಣಿಕ ಸಮೀಕ್ಷೆ ನಡೆಸುವಿರಾ ಎಂದು ಕೇಳಿದಾಗಲೂ ಉತ್ತರ ಕೊಡಲಿಲ್ಲ. ಹಾಗಾಗಿ ನಾವು ಮಾಡುತ್ತಿದ್ದೇವೆ.

Wednesday, 11 June 2025

 

ಧಾರವಾಡ ಜಿಲ್ಲೆ ಈಗ ದ್ವೀಪಸಮೂಹ, ಧಾರಾಕಾರ ಮಳೆಯಿಂದಾಗಿ ರೆಡ್‌ ಅಲರ್ಟ್‌ ಘೋಷಣೆ

    ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಧಾರವಾಡ ಜಿಲ್ಲೆ ಕೂಡ ಧಾರಾಕಾರ ಮಳೆಯಿಂದ ಅಕ್ಷರಶಃ ನಲುಗಿದೆ. ನಿನ್ನೆ (ಜೂನ್‌ 11-ಬುಧವಾರ) ಸುರಿದ ಭಾರೀ ಮಳೆಯಿಂದಾಗಿ, ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಅದೇ ರೀತಿ ನರಗುಂದ ತಾಲೂಕಿನ ಯಮನೂರು ಗ್ರಾಮದಲ್ಲೂ ಭಾರೀ ಪ್ರಮಾಣದಲ್ಲಿ ಮನೆಗಳಿಗೆ ಮಳೆನೀರು ಹರಿದುಬಂದಿದೆ. ಈ ಮಧ್ಯೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜನರಲ್ಲಿ ಮನವಿ ಮಾಡಿದೆ. ಧಾರವಾಡ ಜಿಲ್ಲೆಯ ಮಳೆಯ ಸಂಪೂರ್ಣ ವರದಿ ಇಲ್ಲಿದೆ.



 


ಬೆಂಗಳೂರು, ಜೂನ್ 11: ರಾಜ್ಯ ರಾಜಕೀಯದಲ್ಲಿ ಸಾಮಾಜಿಕ ಆರ್ಥಿಕ ಸಮೀಕ್ಷೆಯ ಜಾತಿ ಗಣತಿ ವರದಿ ಕಿಚ್ಚುಹೊತ್ತಿಸಿದ್ದ ವರದಿಯಾಗಿದೆ. ಜಾತಿಗಣತಿ ವರದಿ ಕುರಿತು ಕರ್ನಾಟಕ ಸರ್ಕಾರವು ಇದೀಗ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಜಾತಿಗಣತಿ ವರದಿಗೆ ಬ್ರೇಕ್ ಹಾಕಲು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ್ದು, ಮರು ಸರ್ವೇ ಮಾಡುವಂತೆ‌ ಕೈ ನಾಯಕರಿಗೆ ಹೈಕಮಾಂಡ್ ತಿಳಿಸಿದೆ. ಸದ್ಯ ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್ ಅಶೋಕ್ ಅವರು ಕನ್ನಡಿಗರ ಪ್ರಶ್ನೆಗಳನ್ನು ಮುಖ್ಯಮಂತ್ರು ಸಿದ್ದರಾಮಯ್ಯ ಅವರಿಗೆ ಕೇಳಿದ್ದಾರೆ.